ಕೊಡಗು : ಕೊಡಗು ಪ್ರವಾಸಿ ತಾಣಗಳ ತವರೂರು ಅಷ್ಟೇ ಅಲ್ಲ. ಕೊಡವರ ಆಚಾರ ವಿಚಾರಗಳು ಕೂಡ ಅತೀ ವಿಶಿಷ್ಟ. ಆದರೆ ಇತ್ತೀಚೆಗೆ ಕೊಡವರ ವಿವಾಹ ಸಮಾರಂಭಗಳಲ್ಲಿ ಕೆಲವರು ಕೇಕ್ ಕತ್ತರಿಸುವುದು, ಶಾಂಪೆನ್ ಹಾರಿಸೋದನ್ನು ರೂಢಿಸಿಕೊಳ್ಳುತ್ತಿದ್ದಾರೆ. ಇದು ಕೊಡವ ಸಂಸ್ಕೃತಿಗೆ ಧಕ್ಕೆ ತರುವ ಆತಂಕ ಎದುರಾಗಿದೆ. ಹೀಗಾಗಿಯೇ ಕೊಡಗಿನ ಪೊನ್ನಂಪೇಟೆ ಕೊಡವ ಸಮಾಜ ಮತ್ತು ವಿರಾಜಪೇಟೆ ಕೊಡವ ಸಮಾಜಗಳು ವಿವಾಹ ಸಮಾರಂಭದಲ್ಲಿ ಕೇಕ್ ಕತ್ತರಿಸುವುದು ಮತ್ತು ಶಾಂಪೆನ್ ಹಾರಿಸೋದನ್ನು ನಿಷೇಧಿಸಿವೆ. ಇತ್ತೀಚೆಗೆ