ಬೆಂಗಳೂರು : ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ ಅಂತ ಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಅಕ್ರಮ ಆಗಿದೆ ಅನ್ನೋದು ಸತ್ಯಕ್ಕೆ ದೂರವಾದ ಮಾತು. ಅತ್ಯಂತ ಪಾರದರ್ಶಕವಾಗಿ, ಬಿಗಿ ಭದ್ರತೆ ನಡುವೆ ಪರೀಕ್ಷೆ ನಡೆದಿದೆ. ಆದರೆ ಉತ್ತರಪತ್ರಿಕೆಯಲ್ಲಿ ಪರೀಕ್ಷಾ ನಿಯಮಗಳನ್ನು ಮೀರಿರುವ 63 ಅಭ್ಯರ್ಥಿಗಳ ಫಲಿತಾಂಶವನ್ನು ಶಿಕ್ಷಣ ಇಲಾಖೆಯೇ ತಡೆ ಹಿಡಿದು, ನೊಟೀಸ್ ನೀಡಿದೆ. ಇದನ್ನು ಅಕ್ರಮ ಎನ್ನಲಾಗದು ಎಂದು ಸಚಿವರು ಪ್ರಕಟಣೆ ಹೊರಡಿಸಿದ್ದಾರೆ. ಪರೀಕ್ಷೆಯಲ್ಲಿ ತಪ್ಪು ಮಾಡಿರುವ ಅಭ್ಯರ್ಥಿಗಳ