ನವದೆಹಲಿ : ಕಾರುಗಳಲ್ಲಿ ಒಂಟಿಯಾಗಿ ಸಂಚರಿಸುವವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ನಿರ್ಬಂಧಗಳನ್ನು ಪರಿಶೀಲಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಶುಕ್ರವಾರ ಸಭೆ ನಡೆಸಿತ್ತು. ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕೋವಿಡ್ ನಿಯಮಗಳ ಬಗೆಗಿನ ಕೆಲವು ವಲಯಗಳಲ್ಲಿ ವಿನಾಯಿತಿ ದೊರಕಿದೆ.ದೆಹಲಿಯಲ್ಲಿ ಒಂಟಿಯಾಗಿ ಕಾರಿನಲ್ಲಿ ಪ್ರಯಾಣಿಸುವವರಿಗೆ ಕೊನೆಗೂ ಮಾಸ್ಕ್ಗಳಿಂದ ಮುಕ್ತಿ ದೊರಕಿದೆ. ಏಕಾಂಗಿಯಾಗಿ ಕಾರಿನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯ ಮಾಸ್ಕ್ ನಿಯಮವನ್ನು ತೆಗೆದು