ಬೆಂಗಳೂರು: ಮೋಟಾರು ವಾಹನ ಮಸೂದೆ ತಿದ್ದುಪಡಿ ವಿರೋಧಿಸಿ ಇಂದು ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಒಕ್ಕೂಟ ಕರೆ ನೀಡಿರುವ ಬಂದ್ ಗೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್, ಆಟೋ ಚಾಲಕರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಬೆಳಿಗ್ಗೆ ಎಂದಿನಂತೆ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಮೆಟ್ರೋ ಸಂಚಾರ ನಡೆದಿದೆ. ಇದರಿಂದಾಗಿ ಸಾರ್ವಜನಿಕರು ನಿರಾತಂಕವಾಗಿ ತಮ್ಮ ಗಮ್ಯ ತಲುಪಲು ಸಾಧ್ಯವಾಗಿದೆ.ಬೆಂಗಳೂರು ಮಾತ್ರವಲ್ಲದೆ, ಮಂಗಳೂರು,