ಬೆಂಗಳೂರು : ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು,ಇಂತಹ ವದಂತಿ ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಮನವಿ ಮಾಡಿದೆ.ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಾಲಕಾಲಕ್ಕೆ ಅನುಮೋದಿಸುವ ದರದಲ್ಲಿ ಗ್ರಾಹಕರು ಬಳಸುವ ವಿದ್ಯುತ್ಗೆ ಬೆಸ್ಕಾಂ ವಿದ್ಯುತ್ ಶುಲ್ಕವನ್ನು ಸಂಗ್ರಹಿಸುತ್ತಿದ್ದು, ಬಿಲ್ ವಿತರಿಸಿದ ದಿನದಿಂದ ಅದರ ಪಾವತಿಗೆ 15 ದಿನಗಳ ಕಾಲಾವಕಾಶವಿರುತ್ತದೆ.ಜೊತೆಗೆ