ಬೆಂಗಳೂರು : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ