ನವದೆಹಲಿ : ಈ ಬಾರಿ ಮುಂಗಾರು ಅವಧಿಯಲ್ಲಿ, ಅಂದರೆ ಜೂನ್ ತಿಂಗಳಿನಿಂದ ಸೆಪ್ಟೆಂಬರ್ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ನಿಂದ ಡಿಸೆಂಬರ್ವರೆಗೆ ದೇಶದ ದಕ್ಷಿಣ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಅವಧಿಯಲ್ಲಿ ಕೂಡ ಸಾಮಾನ್ಯ ಮಳೆ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ. ಈ ಮುಂಗಾರು ಋತುವಿನಲ್ಲಿ, ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಒಟ್ಟಾರೆಯಾಗಿ 87 ಸೆ.ಮೀ.ನಷ್ಟು ದೀರ್ಘಾವಧಿಯ ಸರಾಸರಿ