ಬೆಂಗಳೂರು: ಉತ್ತರ ಕರ್ನಾಟಕವನ್ನು ಅಭಿವೃದ್ಧಿ ವಿಚಾರದಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹುಟ್ಟಿದ ಧ್ವನಿ ದಿನೇ ದಿನೇ ಹೆಚ್ಚುತ್ತಿದೆ. ಇದೇ ರೀತಿ ನಿರ್ಲಕ್ಷ್ಯ ಧೋರಣೆ ಮುಂದುವರಿದರೆ ಮುಂದಿನ ದಿನಗಳಲ್ಲಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿನ ಹೋರಾಟ ತೀವ್ರಗೊಳಿಸಲಾಗುವುದು ಎಂದು ಅಲ್ಲಿನ ನಾಯಕರು ಎಚ್ಚರಿಕೆ ನೀಡಿದ್ದಾರೆ.ಬಿಜೆಪಿ ಶಾಸಕ ಬಿ ಶ್ರೀರಾಮುಲು, ವಿವಿಧ ಮಠಾಧೀಶರು, ಪ್ರತ್ಯೇಕ ರಾಜ್ಯದ ಕೂಗಿಗೆ ನೇತೃತ್ವ ವಹಿಸಿದ್ದಾರೆ. ಅಗತ್ಯ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ