ಬೆಂಗಳೂರು : ಕೊರೊನಾ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಾಲೆಗಳನ್ನು ಕ್ಲೋಸ್ ಮಾಡಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ. ಜೂನ್, ಜುಲೈನಲ್ಲಿ 4ನೇ ಅಲೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಸಿಎಂ ಕೂಡಾ ಸಭೆ ಮಾಡಿದ್ದಾರೆ.ತಾಂತ್ರಿಕ ಸಲಹಾ ಸಮಿತಿ ನಮಗೆ ನೀಡುವ ನಿಯಮಗಳನ್ನು ನಾವು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ