ಬೆಂಗಳೂರು : ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್ಸಿಎಲ್) ನಿರ್ಧರಿಸಿದೆ. ಇಷ್ಟು ದಿನ ಬೆಳಗ್ಗೆ 6ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೋ ರೈಲು ಸಂಚಾರ ಸೇವೆಗಳು ಡಿಸೆಂಬರ್ 20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ಪ್ರಕಟಿಸಿದೆ.ಕೋವಿಡ್ಗೂ ಮುನ್ನ ಇದ್ದ ವೇಳಾಪಟ್ಟಿಯಂತೆಯೇ ಮೆಟ್ರೋ ಸೇವೆಗಳು ಎಂದಿನಂತೆ ಡಿಸೆಂಬರ್ 20ರಿಂದ ಪ್ರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್