ಬೆಂಗಳೂರು : ಮಳೆಯ ಕಾಟದಿಂದ ತತ್ತರಿಸಿದ್ದ ಬೆಂಗಳೂರಿನ ಜನರಿಗೆ ಬೆಸ್ಕಾಂ ಪವರ್ ಕಟ್ ಶಾಕ್ ನೀಡಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಕಡಿತದ ಸಮಸ್ಯೆ ಇತ್ತು. ಅಂತೆಯೇ ಇಂದು ಸೋಮವಾರ (ಡಿಸೆಂಬರ್ 6) ಕೂಡ ವಿದ್ಯುತ್ ಕಡಿತವಾಗಲಿದೆ. ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದು ವಿದ್ಯುತ್ ಕಡಿತ ಇರಲಿದೆ