ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರುತ್ತಿರುವುದರಿಂದಾಗಿ ಇದನ್ನು ತಡೆಗಟ್ಟಲು ದೆಹಲಿ ಸರ್ಕಾರ ಮುಂದಾಗಿದೆ. ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯ ನಿರ್ದೇಶನದ ಪ್ರಕಾರ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲು ತಯಾರಿ