ಬೆಂಗಳೂರು : ಬೆಂಗಳೂರು ನಗರದಲ್ಲಿ ಇಂದು ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಕಟ್ಟಡ ಕಾರ್ಮಿಕರು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡಿದ್ದು, ಫ್ರೀಡಂ ಪಾರ್ಕ್ ಮೂಲಕವಾಗಿ ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮತ್ತೊಂದು ಕಡೆ ಅತಿಥಿ ಬೋಧಕರು ಪ್ರತಿಭಟನೆ ಕೈಗೊಂಡಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.