ದೇಶ – ವಿದೇಶಗಳಲ್ಲಿ ಮತ್ತೆ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಕಳೆದ ಒಂದೇ ವಾರದಲ್ಲಿ ವಿವಿಧೆಡೆಯಿಂದ 11 ಮಿಲಿಯನ್ನಷ್ಟು ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.ಯುರೋಪ್ ಮತ್ತು ಪೂರ್ವ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಹಾಗೂ ಜಾಗರೂಕತೆ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,539 ಹೊಸ ಕೊರೊನಾ ಸೋಂಕಿನ