ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಆತಂಕ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಂಗಳವಾರ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ. ಈಗಾಗಲೇ ದಕ್ಷಿಣ ಆಫ್ರಿಕಾ, ಜರ್ಮನಿ, ಆಸ್ಟ್ರೇಲಿಯಾ, ಯು.ಕೆ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಓಮಿಕ್ರಾನ್ ವೈರಾಣು ಕಾಣಿಸಿಕೊಂಡಿದೆ. ಅತ್ಯಂತ ವೇಗವಾಗಿ ಹರಡುವ ವೈರಾಣು ಇದಾಗಿರುವುದರಿಂದ ಸಹಜವಾಗಿ ಆತಂಕ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸಂಶೋಧಕರ ಪ್ರಕಾರ ಕೋವಿಡ್-19 ಹೊಸ ತಳಿ