ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 8 ಪ್ರಕರಣಗಳು ದೃಢಪಟ್ಟಿವೆ.ಆ ಪೈಕಿ 7 ಪ್ರಕರಣಗಳು ಮುಂಬೈನಲ್ಲೇ ಪತ್ತೆಯಾಗಿವೆ. ಸೋಂಕಿತರಲ್ಲಿ ಯಾರೂ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿಲ್ಲ. ಇವರಲ್ಲಿ ಒಬ್ಬರು ಬೆಂಗಳೂರು ಹಾಗೂ ಇನ್ನೊಬ್ಬರು ದೆಹಲಿಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.ಇದರಿಂದಾಗಿ ಮಹಾರಾಷ್ಟ್ರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 28ಕ್ಕೆ ಹಾಗೂ ದೇಶದಲ್ಲಿ 57ಕ್ಕೆ ಏರಿಕೆಯಾಗಿದೆ.ಸೋಂಕಿತರು 24ರಿಂದ