ಜಿನಿವಾ : ಇದುವರೆಗೆ ಕೊರೊನಾ ಲಸಿಕೆ ಪಡೆಯದ ಮಂದಿಗೆ ಒಮಿಕ್ರಾನ್ ರೂಪಾಂತರಿ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಒಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ನಿಂದಾಗಿ ಜಾಗತಿಕವಾಗಿ ಕೋವಿಡ್ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಡೆಲ್ಟಾಗಿಂತಲೂ ಒಮಿಕ್ರಾನ್ ಬಹಳ ವೇಗವಾಗಿ ಹರಡುತ್ತಿದ್ದು, ಇದನ್ನು ಎಂಡೆಮಿಕ್ ಅಂತಾ ಪರಿಗಣಿಸಲು ಸಾಧ್ಯವಿಲ್ಲ ಎಂದೂ ಡಬ್ಲ್ಯೂಎಚ್ಒ ಹೇಳಿದೆ.ಕೊರೊನಾ ವೈರಸ್ ಸೋಂಕಿನ ಪ್ರಮಾಣ ಜಾಗತಿಕವಾಗಿ ತೀವ್ರ ಸ್ವರೂಪದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಮಿಕ್ರಾನ್