ದಾವಣಗೆರೆ : ಒಂದೆಡೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮುಗಿದಿದೆ. ಇನ್ನೊಂದೆಡೆ ಹಿಂಗಾರು ಹಂಗಾಮಿನಲ್ಲಿ ಬಿತ್ತಿದ ಈರುಳ್ಳಿ ಅತಿಯಾದ ಮಳೆಯಿಂದ ಕೊಳೆಯುತ್ತಿದೆ. ಇಲಾಖೆ ಮಾಹಿತಿಯಂತೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ 34,000 ಹೆಕ್ಟೇರ್ ಈರುಳ್ಳಿ ಬೆಳೆ ಹಾನಿಗೀಡಾಗಿದೆ. ಹೀಗಾಗಿ, ಬೆಳೆಗಾರರು ತೀವ್ರ ನಷ್ಟ ಅನುಭವಿಸುವ ಜತೆಗೆ ಈರುಳ್ಳಿ ಬೆಲೆ ಗಗನಕ್ಕೇರಲಿದ್ದು, ರೈತ-ಗ್ರಾಹಕ ಇಬ್ಬರ ಕಣ್ಣುಗಳಲ್ಲಿ ನೀರು ತರಿಸಲಿದೆ. ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಸೇರಿ ರಾಜ್ಯದ ಪ್ರಮುಖ ಈರುಳ್ಳಿ ಮಾರುಕಟ್ಟೆಗಳಲ್ಲಿ ಅವಕ ಕುಸಿದಿದೆ.