ನವದೆಹಲಿ : ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ಕೊಡವ ಸಮುದಾಯದವರಿಗೆ ನೀಡಿದ ಅವಕಾಶವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು, ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.ಕೊಡವರಿಗೆ ನೀಡಿದ ಅನುಮತಿ ಸಾಂವಿಧಾನಿಕ ಸಿಂಧುತ್ವ ಹೊಂದಿದೆ. ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಕ್ಯಾಪ್ಟನ್ ಚೇತನ ವೈ.ಕೆ. ಎನ್ನುವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.