ಧಾರವಾಡ : ಆಶ್ವಿಜ ಕೊನೆಯಿಂದ ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ.ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ ದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು.ಅದು ಸಂರಕ್ಷಣೆಯಾಗುತ್ತದೆ. ಪ್ರಾರಂಭದಲ್ಲೇ ನಾನು ಮಳೆ, ಗಾಳಿ, ಗುಡುಗು ಇದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು-ನೋವುಗಳಾಗುತ್ತವೆ.