ಬೆಂಗಳೂರು : ಕೃಷ್ಣಾ ಮೇಲ್ದಂಡೆ 3ನೇ ಹಂತ ಸೇರಿದಂತೆ ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಸಂಪೂರ್ಣ ಸದ್ಬಳಕೆ ಮತ್ತು ಇದಕ್ಕಾಗಿ ರೂಪಿಸಿದ ಯೋಜನೆಗಳ ಜಾರಿ ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಹತ್ತು ಹೆಜ್ಜೆ ಮುಂದೆ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬುಧವಾರ ನಿಯಮ 68ರ ಅಡಿ ಕೃಷ್ಣ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿ ವಿಳಂಬ ಕುರಿತು ಪ್ರತಿಪಕ್ಷ