ಇಸ್ಲಾಮಾಬಾದ್ : ಕೆಮಾರಿಯ ಮಾವಾಚ್ ಗೋಥ್ ಪ್ರದೇಶದಲ್ಲಿ 14 ಮಕ್ಕಳು ಸೇರಿದಂತೆ 18 ಜನರು ನಿಗೂಢ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸೇವೆಗಳ ನಿರ್ದೇಶಕ ಅಬ್ದುಲ್ ಹಮೀದ್ ಜುಮಾನಿ ಶುಕ್ರವಾರ ದೃಢಪಡಿಸಿದ್ದಾರೆ.ಸಾವುಗಳಿಗೆ ಕಾರಣ ಕಂಡುಹಿಡಿಯುವ ನಿಟ್ಟಿನಲ್ಲಿ ಆರೋಗ್ಯ ತಂಡವು ಕಾರ್ಯನಿರ್ವಹಿಸುತ್ತಿದೆ. ಈ ಕಾಯಿಲೆ ಸಮುದ್ರ ಅಥವಾ ನೀರಿಗೆ ಸಂಬಂಧಿಸಿದ್ದಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಮೃತರು ತೀವ್ರ ಜ್ವರ, ಗಂಟಲು ಊತ ಮತ್ತು ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದರು ಎಂದು ಕುಟುಂಬಸ್ಥರು