ಬೆಂಗಳೂರು : ನಾಳೆಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭವಾಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು 4 ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣಕ್ಕೆ ಪಂಚರತ್ನ ರಥಯಾತ್ರೆಯನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ನಡೆಯಲಿದ್ದು, ಡಿಸೆಂಬರ್