ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ವೈಮನಸ್ಯ ಸೃಷ್ಟಿಯಾಗಲು ಕಾರಣವಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಡಿಸಿಎಂ ಪರಮೇಶ್ವರ್ ಗರಂ ಆಗಿದ್ದಾರೆ.ಲೋಕಸಭೆ ಚುನಾವಣೆ ಮುಗಿಯಲಿ. ಆಮೇಲೆ ನೋಡೋಣ ಎಂದು ಸಿದ್ದರಾಮಯ್ಯ ಆಪ್ತರೊಂದಿಗೆ ಹೇಳಿಕೊಂಡಿರುವುದು ಪರಮೇಶ್ವರ್ ಸಿಟ್ಟಿಗೆ ಕಾರಣವಾಗಿದೆ. ಬಜೆಟ್ ಮಂಡನೆ ವಿಚಾರದಲ್ಲಿ ಸಿದ್ದರಾಮಯ್ಯ ತಕರಾರು ತೆಗೆದಿರುವುದರಿಂದ ಅಸಮಾಧಾನದ ಅಲೆ ಸೃಷ್ಟಿಯಾಗಿದೆ.ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಪರಮೇಶ್ವರ್ ಸಿಟ್ಟು ಹೊರಹಾಕಿದ್ದಾರೆ. ನೀವು ಎಷ್ಟು ಬಾರಿ ಈ ಬಗ್ಗೆ ಪ್ರಶ್ನೆ ಕೇಳಿದರೂ ನಾನು ಹೀಗೇ