ಮಡಿಕೇರಿ : ಮೂರು-ನಾಲ್ಕು ವರ್ಷಗಳ ಅತಿವೃಷ್ಟಿ ಮತ್ತು ಕೊರೊನಾ ಸಂಕಷ್ಟದ ದಿನಗಳ ನಂತರ ಇದೀಗ ಕೊಡಗಿನಲ್ಲಿ ಮಕ್ಕಳನ್ನು ದತ್ತು ಸ್ವೀಕರಿಸುವ ಪೋಷಕರ ಸಂಖ್ಯೆಯೂ ಹೆಚ್ಚಾಗಿದೆ.ಕೊಡಗು ಜಿಲ್ಲೆಯಲ್ಲದೇ ಹೊರ ಜಿಲ್ಲೆಗಳಿಂದಲೂ ಆನ್ಲೈನ್ ಅರ್ಜಿ ಸಲ್ಲಿಸಿ ಮಗುವನ್ನು ದತ್ತು ಪಡೆದುಕೊಳ್ಳಲು ಮಾತೃ ಹೃದಯಗಳು ಮುಂದಾಗುತ್ತಿವೆ. ಕಳೆದ ಐದು ವರ್ಷಗಳಲ್ಲಿ 48 ಕ್ಕೂ ಹೆಚ್ಚು ಪೋಷಕರು ದತ್ತು ಸ್ವೀಕರಿಸಲು ಅರ್ಜಿಗಳನ್ನು ಸಲ್ಲಿಸಿದ್ದಾರೆ.ಕೊಡಗಿನಲ್ಲಿಯೂ ದತ್ತು ಸ್ವೀಕಾರದ ಮನೋಭಾವ ಮುಕ್ತವಾಗಿ ವ್ಯಾಪಿಸಿಕೊಳ್ಳುತ್ತಿರುವುದು ಈ ಮೂಲಕ ಸಾಬೀತಾಗುತ್ತಿದೆ. ಹೌದು,