ಬೆಂಗಳೂರು : ರಾಜ್ಯದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರಿಂದ ರಕ್ಷಣೆ ನೀಡಲು ಆರಂಭಿಸಿರುವ ಲಸಿಕಾ ಅಭಿಯಾನಕ್ಕೆ ಇನ್ನೂ ನಿರೀಕ್ಷಿತ ವೇಗ ದೊರೆತಿಲ್ಲ.ಮಾ.16ರಿಂದ ಅಭಿಯಾನ ಆರಂಭಗೊಂಡಿದ್ದರೂ ರಾಜ್ಯದಲ್ಲಿನ 20 ಲಕ್ಷ ಮಕ್ಕಳ ಪೈಕಿ ಈವರೆಗೆ 1.14 ಲಕ್ಷ ಮಕ್ಕಳು ಮಾತ್ರ ಲಸಿಕೆ ಪಡೆದಿದ್ದಾರೆ. ಸದ್ಯ ಶೇ.5 ರಷ್ಟುಮಾತ್ರ ಸಾಧನೆಯಾಗಿದೆ.ಸದ್ಯ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡುತ್ತಿರುವುದು, ಪರೀಕ್ಷೆ ನಡೆಯುತ್ತಿರುವುದು, ಚಿಕ್ಕಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರು ಹಿಂಜರಿಯುತ್ತಿರುವ ಪರಿಣಾಮ