ಗಾಂಧಿನಗರ : ಮುಂಬೈ, ಮಹಾರಾಷ್ಟ್ರದ ಬಳಿಕ ಗುಜರಾತ್ನಲ್ಲೂ ಮಳೆಯ ಆರ್ಭಟ ಹೆಚ್ಚಾಗುತ್ತಿದೆ.ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗುಜರಾತಿನ 8 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಮುಂಬೈ ಮತ್ತು ಅದರ ಉಪನಗರಗಳಲ್ಲಿ ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಿನ್ನೆ ನಾಲ್ವರು ಮೃತಪಟ್ಟಿದ್ದಾರೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಒಟ್ಟು ಮಳೆಯ ಪ್ರಮಾಣ ಶೇ.99 ತಲುಪಿದೆ