ಮಂಗಳೂರು, ಸೆ 15 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ಪ್ರಶ್ನಿಸಿ ವಿಮಾನ ನಿಲ್ದಾಣಗಳ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾ ಮಾಡಿದೆ.ದೇಶದ ಹಲವು ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ನೀತಿ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಇದರಲ್ಲಿ ನ್ಯಾಯಾಲಯದ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದಿದ್ದ ಕೇರಳ ಹೈಕೋರ್ಟ್ ನಿರ್ಧಾರವನ್ನು ಆಧರಿಸಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ