ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನಲೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ ಭಾರೀ ಕಸರತ್ತು ಮಾಡಲಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಧಾನಿ ಮೋದಿಯೇ ಸ್ಟಾರ್ ಪ್ರಚಾರಕರಾಗಿದ್ದರು. ಪ್ರಧಾನಿ ಮೋದಿ ರ್ಯಾಲಿಯಿಂದಲೇ ಜನಮನ ಗೆದ್ದಿದ್ದರು. ಈ ಬಾರಿ ಮತ್ತೆ ಅದನ್ನೇ ಮಾಡಲು ಮೋದಿ ಮುಂದಾಗಿದ್ದಾರೆ.ಮುಂದಿನ ವರ್ಷ ಫೆಬ್ರವರಿಯೊಳಗೆ ಪ್ರಧಾನಿ ಮೋದಿ ದೇಶದಾದ್ಯಂತ ಸುಮಾರು 50 ರ್ಯಾಲಿಗಳಲ್ಲಿ ಪಾಲ್ಗೊಳ್ಳಲಿದ್ದಾರಂತೆ! ಈ ಸಂದರ್ಭದಲ್ಲಿ ಸುಮಾರು 100 ಲೋಕಸಭೆ ಕ್ಷೇತ್ರಗಳಲ್ಲಿ