ಬೆಂಗಳೂರು : ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಹಿಸಲಿದ್ದಾರೆ. ಕೇವಲ ಸಿದ್ದರಾಮಯ್ಯ ಸರ್ಕಾರದ ಮಂತ್ರಿಮಂಡಲದವರು ಮಾತ್ರವಲ್ಲ, ಡಿ.ವಿ.ಸದಾನಂದಗೌಡ, ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ ಸಂಸದರಿಗೂ ಆಹ್ವಾನ ನೀಡಲಾಗಿದೆ.ನಾಳೆಯ ಶಕ್ತಿ ಯೋಜನೆ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಸರ್ಕಾರ ಸಿದ್ದತೆ ಮಾಡಿದೆ. ಬಸ್ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ವರೆಗೂ ರೌಂಡ್ಸ್ ಹಾಕಲಿದ್ದು,