ಬೆಂಗಳೂರು : ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ದಿನದ ನೆನಪಿಗಾಗಿ ಆ.23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಚಂದ್ರಯಾನ-3 ರ ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿ ಮಾತನಾಡಿದರು. ಇದೇ ವೇಳೆ ಮತ್ತೆರಡು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಜಾಗಕ್ಕೆ ಶಿವಶಕ್ತಿ ಎಂದು ಹಾಗೂ ಚಂದ್ರಯಾನ -2 ಪತನವಾದ ಜಾಗಕ್ಕೆ ತಿರಂಗ ಎಂಬ ಹೆಸರನ್ನು