ಉಡುಪಿ : ಪಕ್ಷದ ಪರ ಪ್ರಚಾರ ಮಾಡಲು ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಉಡುಪಿಗೆ ಆಗಮಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಉಡುಪಿಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ ನಿಷೇಧ ಮಾಡಲಾಗಿದೆ. ಎಂಜಿಎಂ ಮೈದಾನದಲ್ಲಿ ಬಿಜೆಪಿ ಸಮಾವೇಶ