ಬೆಂಗಳೂರು: ಇಂದು ಆರೋಗ್ಯ ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಹೋಗುವವರಿದ್ದರೆ ಪ್ಲ್ಯಾನ್ ಬದಲಾಯಿಸುವುದೇ ಒಳ್ಳೆಯದು. ಯಾಕೆಂದರೆ ಇಂದು ಸಂಜೆ 6 ಗಂಟೆಯವರೆಗೆ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ ಎಂಸಿ) ವಿದೇಯಕ ವಿರೋಧಿಸಿ 2 ಲಕ್ಷಕ್ಕೂ ಅಧಿಕ ಖಾಸಗಿ ವೈದ್ಯರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮುಷ್ಕರ ನಡೆಯಲಿದೆ. ಹೊರ ರೋಗಿಗಳ ವಿಭಾಗ ಬಂದ್ ಮಾಡಿ ಪ್ರತಿಭಟನೆ