ಶಿವಮೊಗ್ಗ : ಹಿಜಬ್ – ಕೇಸರಿ ವಿವಾದ ತೀವ್ರಗೊಂಡಿದ್ದು ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲುತೂರಾಟ ನಡೆದಿದೆ. ಬಸ್ಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದೆ.ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದರೆ ಇನ್ನೊಂದು ಕಡೆಯಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ