ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗಣೇಶ ಹಬ್ಬ ಆಚರಣೆ ಭಾವನಾತ್ಮಕವಾದುದು. ಆದರೆ, ನೆರೆಯ ಕೇರಳದಲ್ಲಿ ಓಣಂ, ಮೊಹರಂನಿಂದ ಕೋವಿಡ್ ಹತೋಟಿ ತಪ್ಪಿದೆ. ಆ ರೀತಿ ರಾಜ್ಯದಲ್ಲಿ ಹಳಿ ತಪ್ಪಬಾರದು ಎಂಬುದು ಸರಕಾರದ ಉದ್ದೇಶ. ಅಂತಿಮವಾಗಿ ಸರಕಾರ ಎಲ್ಲಅಂಶಗಳನ್ನು ಗಮನದಲ್ಲಿರಿಸಿ ತೀರ್ಮಾನ ಕೈಗೊಳ್ಳಲಿದೆ.