ಬೆಂಗಳೂರು : ಬಿಬಿಎಂಪಿ ವಾರ್ಡ್ವಾರು ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲಾಗಿದ್ದು, ಮೀಸಲಾತಿಯ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ.2011ರ ಜನಗಣತಿಯ ಆಧಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 243 ವಾರ್ಡ್ವಾರು ಮೀಸಲಾತಿಯನ್ನು ಅಂತಿಮಗೊಳಿಸಿದೆ. 243 ವಾರ್ಡ್ ಗಳ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡದೇ ಆದೇಶ ಹೊರಬಿದ್ದಿದೆ.ಇದರ ಕರಡು ಅಧಿಸೂಚನೆಯನ್ನು ಆಗಸ್ಟ್ 3 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣಿಗಳನ್ನು ಪರಿಶೀಲಿಸಿ ಈಗ ಅಂತಿಮ ಅಧಿಸೂಚನೆ