ಬೆಂಗಳೂರು : ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ