ದ್ವಿತೀಯ ಪಿಯುಸಿ ಫಲಿತಾಂಶ

ಜುಲೈ 31ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ; ಅಂಕಕ್ಕೆ ನಿಗದಿಯಾದ ಮಾನದಂಡ

ಬೆಂಗಳೂರು| Ramya kosira| Last Modified ಸೋಮವಾರ, 5 ಜುಲೈ 2021 (15:11 IST)
 ಬೆಂಗಳೂರು (ಜುಲೈ 05): ಕಳೆದ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನ ತೇರ್ಗಡೆ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈಗ ನಿರೀಕ್ಷೆಯಂತೆ ಪಿಯುಸಿ ಪುನಾವರ್ತಿತ  (ಖeಠಿeಚಿಣeಡಿs) ವಿದ್ಯಾರ್ಥಿಗಳಿಗೂ ಅದೇ ಸಿಹಿ ಸುದ್ದಿ ಇದೆ. ಎಲ್ಲಾ ರಿಪೀಟರ್ಸ್ ವಿದ್ಯಾರ್ತಿಗಳನ್ನ ಪಾಸ್ ಮಾಡುವುದಾಗಿ ಸರ್ಕಾರ ಹೇಳಿದೆ. ಇಂದು ರಾಜ್ಯ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ವೇಳೆ ಸರ್ಕಾರ ಈ ಮಾಹಿತಿ ನೀಡಿದೆ. ಇನ್ನು, ದ್ವಿತೀಯ ಪಿಯುಸಿ ಖಾಸಗಿ ವಿದ್ಯಾರ್ಥಿಗಳಿಗೆ (Pಡಿivಚಿಣe Sಣuಜeಟಿಣs) ಮುಂದಿನ ತಿಂಗಳು ಪರೀಕ್ಷೆ ನಡೆಸಲಾಗುತ್ತದೆ. ಆಗಸ್ಟ್ ತಿಂಗಳಲ್ಲಿ 17,477 ಪ್ರೈವೇಟ್ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.

 ಆಗಸ್ಟ್ 31ರೊಳಗೆ ಇವರಿಗೆ ಪರೀಕ್ಷೆ ಆಯೋಜಿಸುವಂತೆ ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶನ ನೀಡಿದೆ. ಪರೀಕ್ಷೆ ದಿನಾಂಕವನ್ನು ಸದ್ಯದಲ್ಲೇ ಶಿಕ್ಷಣ ಇಲಾಖೆ ಪ್ರಕಟಿಸುವ ನಿರೀಕ್ಷೆ ಇದೆ. ರಿಪೀಟರ್ಸ್ ಅನ್ನು ಪಾಸ್ ಮಾಡುವುದು ಹಾಗೂ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದನ್ನು ಸರ್ಕಾರ ನಿರ್ಧರಿಸುವ ವಿಚಾರದ ಬಗ್ಗೆ ನ್ಯೂಸ್18 ಕನ್ನಡ ವಾಹಿನಿ ನಿನ್ನೆಯೇ ವರದಿ ಪ್ರಕಟಿಸಿತ್ತು.
ವಿಚಾರಣೆ ವೇಳೆ, ದ್ವಿತೀಯ ಪಿಯುಸಿ ಫ್ರೆಷರ್ ವಿದ್ಯಾರ್ಥಿಗಳಿಗೆ ನೀಡುವ ಅಂಕಗಳಿಗೆ ಮಾನದಂಡಗಳೇನು ಎಂದು ಹೈಕೋರ್ಟ್ ಕೇಳಿತು. ಇದಕ್ಕೆ ಉತ್ತರಿಸಿದ ಸರ್ಕಾರ, ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಅಸೆಸ್ಮೆಂಟ್ ಸಂಯೋಗದಲ್ಲಿ ಅಂಕ ನೀಡಲಾಗುವುದು ಎಂದು ತಿಳಿಸಿತು. ಎಸ್ ಎಸ್ ಎಲ್ ಸಿಯಲ್ಲಿ ಪಡೆದ ಅಂಕಗಳ ಶೇ. 45; ಪ್ರಥಮ ಪಿಯುಸಿಯ ಶೇ. 45 ಅಂಕ ಹಾಗೂ ದ್ವಿತೀಯ ಪಿಯುಸಿಯ ಅಸೆಸ್ಮೆಂಟ್ ಅಂಕ ಶೇ. 10ರಷ್ಟು ಪರಿಗಣನೆ ಮಾಡಿ ಅಂಕಗಳನ್ನ ನೀಡಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಜುಲೈ 31ರೊಳಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ (ಕಳೆದ ಬಾರಿ ಶೈಕ್ಷಣಿಕ ಸಾಲಿನ ಮಕ್ಕಳು) ಜುಲೈ 31ರ ಒಳಗೆ ರಿಸಲ್ಟ್ ಸಿಗಲಿದೆ ಎನ್ನಲಾಗಿದೆ.
ಇನ್ನು, ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 35 ಅಂಕದ ಜೊತೆಗೆ ಶೇ. 5ರಷ್ಟು ಗ್ರೇಸ್ ಅಂಕಗಳನ್ನ ನೀಡಲಾಗುತ್ತದೆ ಎಂದು ಉಚ್ಚ ನ್ಯಾಯಾಲಯಕ್ಕೆ ಸರ್ಕಾರ ಸ್ಪಷ್ಟಪಡಿಸಿದೆ.
ಖಾಸಗಿ ವಿದ್ಯಾರ್ಥಿಗಳಿಗೆ ಆಗಸ್ಟ್ 31ರೊಳಗೆ ಪರೀಕ್ಷೆ ನಡೆಸಿ, ಸೆಪ್ಟೆಂಬರ್ 20ರ ಒಳಗೆ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಪರೀಕ್ಷೆಯ ವೇಳೆ ಕೋವಿಡ್ ಮಾರ್ಗಸೂಚಿಗಳ ಪಾಲನೆ ಅಗುವಂತೆ ಎಚ್ಚರ ವಹಿಸಬೇಕೆಂದು ನ್ಯಾಯಾಲಯವು ಶಿಕ್ಷಣ ಇಲಾಖೆ ಮತ್ತು ಸರ್ಕಾರಕ್ಕೆ ತಿಳಿಸಿದೆ. ಒಟ್ಟು 17,477 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.
ಇನ್ನು, ಪಿಯುಸಿ ಪರೀಕ್ಷೆಗಳನ್ನ ಸರ್ಕಾರ ರದ್ದು ಮಾಡಿದರೂ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನ ನಡೆಸುವ ನಿರ್ಧಾರ ಮಾಡಿದೆ. ಕೆಲ ದಿನಗಳ ಹಿಂದೆ ಪರೀಕ್ಷೆಯ ದಿನಾಂಕವನ್ನೂ ಪ್ರಕಟಿಸಿದೆ. ಸಕಲ ಮುಂಜಾಗ್ರತಾ ಕ್ರಮಗಳಿಂದ ಎಚ್ಚರಿಕೆಯಿಂದ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.
 
ಇದರಲ್ಲಿ ಇನ್ನಷ್ಟು ಓದಿ :