ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು ನಟ ಪುನೀತ್ ರಾಜ್ ಕುಮಾರ್. ಈ ಮೂಲಕ ಲಕ್ಷಾಂತರ ಜನರಿಗೆ ಪ್ರೇರಣೆಯೂ ಆಗಿದ್ದರು. ಹಾಗಾಗಿ ಪುನೀತ್ ರಾಜ್ ಕುಮಾರ್ ಅವರನ್ನು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಅರಿವು ಅಭಿಯಾನದ ರಾಯಭಾರಿಯನ್ನಾಗಿ ಮಾಡಲಾಗಿದೆ. ಮಂಗಳವಾರವಷ್ಟೇ ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.ಆರೋಗ್ಯ ಇಲಾಖೆ, ಡಾ.ರಾಜ್ ಕುಮಾರ್ ಟ್ರಸ್ಟ್ ಮತ್ತು ಎಸ್ಸಿರ್ಲಾ ವಿಷನ್ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ನಡೆದ ಈ