ನವದೆಹಲಿ : ಉಕ್ರೇನ್ ಮೇಲೆ ಆಕ್ರಮಣ ನಡೆಸುತ್ತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ 2ನೇ ಬಾರಿ ದೂರವಾಣಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದಾರೆ. ಉಭಯ ದೇಶಗಳ ನಾಯಕರು ಉಕ್ರೇನ್ನಲ್ಲಿನ ಸಧ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದ್ದಾರೆ. ರಷ್ಯಾ ಭೀಕರ ದಾಳಿಗೆ ತುತ್ತಾಗಿರುವ ಉಕ್ರೇನ್ನ ಪ್ರಮುಖ ನಗರವೂ ಆದ ಖಾರ್ಕಿವ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರ ಸುರಕ್ಷಿತ ಸ್ಥಳಾಂತರ ಕುರಿತು ಪುಟಿನ್ ಅವರೊಂದಿಗೆ ಮೋದಿ