ರಾಮನಗರ : ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್ನನ್ನು ಬಂಧಿಸಿದ್ದಾರೆ.ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಕ್ಲರ್ಕ್ ರಂಗೇಗೌಡ ಬಂಧಿತ ಆರೋಪಿ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್ ಮೂಲಕ ಸೋರಿಕೆ ಆಗಿತ್ತು.ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್ನಲ್ಲೇ ಶೇರ್ ಮಾಡಲಾಗಿತ್ತು.ಇದಲ್ಲದೇ ಕೆಂಪೇಗೌಡ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗಳಿಸಿದ್ದು,