ನವದೆಹಲಿ : ಕೇಂದ್ರ ಸರ್ಕಾರ ಲಸಿಕೆ ವಿಚಾರದಲ್ಲಿ ದಾಖಲೆ ಬರೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಶುಕ್ರವಾರ ದೇಶಾದ್ಯಂತ ಕೋವಿಡ್ 19 ಲಸಿಕಾ ಬೃಹತ್ ಮೇಳವನ್ನು ಆಯೋಜಿಸಲಾಗಿತ್ತು. ಒಂದೇ ದಿನ 2 ಕೋಟಿ ಡೋಸ್ ಗಡಿ ದಾಟುವ ಮೂಲಕ ದೇಶ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದೆ.