ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು, ಶನಿವಾರ, 26 ಮೇ 2018 (11:16 IST)

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿರುವ ಕಾಂಗ್ರೆಸ್ ನಲ್ಲಿ ಇದೀಗ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚಟುವಟಿಕೆಗಳು ಚುರುಕಾಗಿವೆ. ಈ ನಿಟ್ಟಿನಲ್ಲಿ ಹೈಕಮಾಂಡ್ ನಿಂದ ರಾಜ್ಯ ನಾಯಕರಿಗೆ ಬುಲಾವ್ ಬಂದಿದೆ.
 
ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸಭೆಗೆ ಹಾಜರಾಗುವಂತೆ ಬುಲಾವ್ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ ವಿಶೇಷ ವಿಮಾನದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ದೆಹಲಿಗೆ ತೆರಳಲಿದೆ.
 
ಮಾಜಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ಸಚಿವ ಸ್ಥಾನದ ಆಕಾಂಕ್ಷಿ ಡಿಕೆ ಶಿವಕುಮಾರ್, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ ಜತೆ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ನೀಡಿ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ‍ಗೆ 20 ಸಚಿವ ಸ್ಥಾನಗಳನ್ನು ಬಿಟ್ಟುಕೊಡಲು ಜೆಡಿಎಸ್ ಸಿದ್ಧವಾಗಿದೆ ಎನ್ನಲಾಗಿದೆ. ಈ ಸ್ಥಾನಕ್ಕಾಗಿ ಈಗಾಗಲೇ ಭಾರೀ ಪೈಪೋಟಿ ಶುರುವಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಜಿ ಸಿಎಂ ಯಡಿಯೂರಪ್ಪರಿಂದ ಇಂದು ಬೈಕ್ ಯಾತ್ರೆ

ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳ ಘಟಾನುಘಟಿ ...

news

ಮೊಮ್ಮಗ ಪ್ರಜ್ವಲ್ ರೇವಣ್ಣ ಜತೆಗೆ ಬೀದಿಗಿಳಿಯಲಿರುವ ಎಚ್ ಡಿ ದೇವೇಗೌಡ!

ಬೆಂಗಳೂರು: ಮೊಮ್ಮಗ ಪ್ರಜ್ವಲ್ ರೇವಣ್ಣ ಜತೆಗೆ ಜೆಡಿಎಸ್ ವರಿಷ್ಠ ದೇವೇಗೌಡರು ಇಂದು ರಾಜರಾಜೇಶ್ವರಿ ನಗರದ ...

news

ಮೋದಿ ಸರ್ಕಾರಕ್ಕೆ ನಾಲ್ಕು ವರ್ಷ: 125 ಕೋಟಿ ಜನರಿಗೆ ಮೋದಿ ಹೇಳಿದ್ದೇನು?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ ಡಿಎ ಸರ್ಕಾರಕ್ಕೆ ಇಂದು ನಾಲ್ಕನೇ ವರ್ಷದ ...

news

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆಯೇ ಡಿಕೆ ಶಿವಕುಮಾರ್?

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ ಕಾಂಗ್ರೆಸ್ ...