ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಾರ ಬಿರುಸುಗೊಳಿಸಲು ಮುಂದಾಗಿದೆ. ಏಪ್ರಿಲ್ 27 ರಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ. ಬಂಟ್ವಾಳ್ ದಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಲಿದೆ. ಬಳಿಕ ರಾಹುಲ್ ಗಾಂಧಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ