ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ, ಸೇತುವೆ ಮುಳುಗಡೆ ಸಮಸ್ಯೆ ಸಾಮಾನ್ಯವಾಗಿದೆ. ಮಳೆಯ ಇಫೆಕ್ಟ್ ಇದೀಗ ಸಿಎಂ ಕುಮಾರಸ್ವಾಮಿ ಮೇಲೂ ತಟ್ಟಿದೆ.ದ.ಕ. ಜಿಲ್ಲೆಯಲ್ಲಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಿಗೆ ಭೇಟಿ ನೀಡಿರುವ ಸಿಎಂ ಕುಮಾರಸ್ವಾಮಿ ಮಾರ್ಗ ಮಧ್ಯೆ ಮಳೆಯಿಂದಾಗಿ ಸಂಕಷ್ಟಕ್ಕೀಡಾಗಬೇಕಾಯಿತು.ಇಂದು ಬೆಳಿಗ್ಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕುಟುಂಬ ಸಮೇತರಾಗಿ ಭೇಟಿ ಮಾಡಿರುವ ಕುಮಾರಸ್ವಾಮಿ ಮಳೆಯಿಂದಾಗಿ ಬದಲಿ ಮಾರ್ಗದಲ್ಲಿ ಸಂಚರಿಸಬೇಕಾಯಿತು. ಮಳೆಗೆ ಪುತ್ತೂರು ಬಳಿ ಉದನೆ ಎಂಬಲ್ಲಿ ಮಾರ್ಗ ಸಂಚಾರ ಬಂದ್