ನವದೆಹಲಿ, ಸೆ 4: ದೇಶದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 7ರವರೆಗೆ ಹವಾಮಾನ ವರದಿಯನ್ನು ಇಲಾಖೆ ಬಿಡುಗಡೆಗೊಳಿಸಿದ್ದು, ಈ ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳು ಅಧಿಕ ಮಟ್ಟದ ಮಳೆ ಪಡೆಯಲಿರುವುದಾಗಿ ತಿಳಿಸಿದೆ. ಪಂಜಾಬ್, ಹರಿಯಾಣ, ನೈಋತ್ಯ ರಾಜಸ್ತಾನ ಹಾಗೂ ಹಿಮಾಚಲ ಪ್ರದೇಶದಲ್ಲಿ ಶನಿವಾರ ಹಾಗೂ ಭಾನುವಾರ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಕಳೆದ