ಬೆಂಗಳೂರು, ಸೆ 21 : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಬಿರುಸಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ, ಸಂಜೆಯೂ ಮಳೆಯಾಗಿದ್ದು,