ಬೆಂಗಳೂರು : ಬರದ ಆತಂಕದ ನಡುವೆ ರಾಜ್ಯದಲ್ಲಿ ಮಳೆರಾಯ ತಂಪೆರೆಯುತ್ತಿದ್ದಾನೆ. ಮುಂದಿನ ಮೂರ್ನಾಲ್ಕು ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಸಿಲಿಕಾನ್ ಸಿಟಿ ಮಂದಿಯನ್ನು ಸಂಜೆ ಮಳೆ ಕಾಡಲಿದೆ. ಮಳೆ ಜೊತೆ ಶೀತಗಾಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚನೆ ಕೊಟ್ಟಿದೆ. ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳು ಉತ್ತರ ಒಳನಾಡಿನ