ಬೆಂಗಳೂರು : ರಾಜ್ಯದಲ್ಲಿ ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 4 – 5 ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ