ಮಂಗಳೂರು: ದ.ಕ. ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ಶಾಲಾ, ಕಾಲೇಜುಗಳು ಇಂದು ಪುನರಾರಂಭಗೊಂಡಿವೆ.ಕಳೆದ ನಾಲ್ಕು ದಿನದಿಂದ ಬಿಡುವಿಲ್ಲದೇ ಮಳೆ ಸುರಿಯುತ್ತಿದ್ದ ಕಾರಣ ಜಿಲ್ಲೆಯಾದ್ಯಂತ ಪ್ರವಾಹ ಸದೃಶ ವಾತಾವರಣವಿತ್ತು. ಇದೇ ಕಾರಣಕ್ಕೆ ಕಳೆದ ನಾಲ್ಕು ದಿನಗಳಿಂದ ಶಾಲಾ, ಕಾಲೇಜುಗಳು ತೆರೆದಿರಲಿಲ್ಲ.ಇಂದು ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಹೀಗಾಗಿ ಶಾಲಾ ಕಾಲೇಜು ಪುನರಾರಂಭಗೊಂಡಿದೆ. ಆದರೆ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ